ಕೆಎಂಎಫ್ ನಿಂದ ಬ್ಯಾಂಕ್ ಸ್ಥಾಪನೆ ಚಿಂತನೆ
ಬೆಂಗಳೂರು : ರಾಜ್ಯದಲ್ಲಿ ಕೆಎಂಎಫ್ ಬ್ಯಾಂಕ್ ಸ್ಥಾಪನೆಗೆ ಚಿಂತನೆ ನಡೆದಿದೆ. ಕೆಎಂಎಫ್ ಪ್ರತಿ ವರ್ಷ 17 ಸಾವಿರ ಕೋಟಿ ವಹಿವಾಟು ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ಯಾಂಕ್ ಮಾಡುವಂತೆ ಸಲಹೆ ನೀಡಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷ ಕೆಎಂಎಫ್ 17 ಸಾವಿರ ಕೋಟಿ ವಹಿವಾಟು ನಡೆಸುತ್ತದೆ.
ಜತಗೆ ರಾಜ್ಯ ದಲ್ಲಿ ಹಾಲಿನ ಏಕರೂಪ ದರ ನಿಗದಿ ಮಾಡಲು ಚಿಂತನೆ ನಡೆಸಿದೆ.
ಮುಂಬರುವ ಡಿಸೆಂಬರ್ ನಲ್ಲಿ ನಡೆಯುವ ಸಾರ್ವತ್ರಿಕ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.
ಹಾಗೆ ಒಂದು ವರ್ಷಕ್ಕೆ ಕೆಎಂಎಫ್ 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಹೊಂದಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬ್ಯಾಂಕ್ ಮಾಡುವಂತೆ ಸಲಹೆ ನೀಡಿದ್ದಾರೆ.
ಜತಗೆ ನೂರು ಕೋಟಿ ರೂಪಾಯಿ ಠೇವಣಿ ನೀಡುವ ಭರವಸೆ ಸಹ ನೀಡಿದ್ದಾರೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಕೆಎಂಎಫ್ ನಿಂದ ಬ್ಯಾಂಕ್ ಸ್ಥಾಪನೆ ಮಾಡಿದ್ರೆ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗಲಿದೆ. ಹಾಗೆ ಹಾಲಿನ ಮೊತ್ತ ರೈತರ ಹಣ ಪಾವತಿ ಮಾಡಲು ಬ್ಯಾಂಕ್ ನಿಂದ ಅನಕೂಲ ಆಗಲಿದೆ.









