ಬೆಂಗಳೂರು : ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಎಷ್ಟೇ ಮುಂದಿದ್ದರೂ ಚುನಾವಣೆಯಲ್ಲಿ ಮಾತ್ರ ಗೆಲುವು ಸಾಧಿಸುವುದು ಬಿಜೆಪಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರತಿ ಚುನಾವಣೆಯಲ್ಲಿಯೂ ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದೇ ಹೇಳುತ್ತವೆ. ಪ್ರಬಲ ಪೈಪೋಟಿ ಇವೆ ಎಂದೂ ಹೇಳುತ್ತವೆ. ಆದರೆ, ಫಲಿತಾಂಶ ಪ್ರಕಟವಾದಾಗ ಬಿಜೆಪಿಯೇ ಗೆಲುವು ಸಾಧಿಸಿರುತ್ತದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶೆಟ್ಟರ್ ಹಾಗೂ ಸವದಿ ಸೋಲುತಾರೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಡಬಲ್ ಇಂಜಿನ್ ಸರ್ಕಾರ ರಚಿಸಲಿದೆ ಎಂದು ಶಾ ಹೇಳಿದ್ದಾರೆ. ಯಾದಗಿರಿ, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಅವರು ಚುನಾವಣಾ ಪ್ರಚಾರ ನಡೆಸಿದ್ದಾರೆ.