ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಸಚಿವ ಡಾ. ಕೆ ಸುಧಾಕರ್ (K Sudhakar) ಕುರಿತು ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ (JDS) 120 ಸ್ಥಾನಗಳಲ್ಲಿ ಗೆಲುವು ಸಾದಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಸಚಿವ ಡಾ. ಕೆ ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಸುಧಾಕರ್ ಹಣದ ದಾಹ ಪ್ರತಿಯೊಬ್ಬ ಹಳ್ಳಿಗರಿಗೂ ಗೊತ್ತಿದೆ. ಜನರಿಗೆ ಟಿವಿ, ರೆಫ್ರಿಜರೇಟರ್, ಸ್ಟೌವ್ ಎಲ್ಲವನ್ನೂ ಕೊಟ್ಟಿರುವ ಅವರು ದೊಡ್ಡ ಶ್ರೀಮಂತರು ಎಂದು ವ್ಯಂಗ್ಯವಾಡಿದ್ದಾರೆ.
ಈ ಬಾರಿ ನಾವೇ ಅವರನ್ನು ಮನೆಯಲ್ಲಿ ಕುಳಿತುಕೊಳ್ಳುವಂತೆ ಮಡಿದರೆ, ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲವಲ್ಲ. ಸ್ವಲ್ಪ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ್ದ ಕೆ ಸುಧಾಕರ್, ಜೆಡಿಎಸ್ 100 ಸ್ಥಾನ ಗಳಿಸಲ್ಲ. ಒಂದು ವೇಳೆ ಆ ಪಕ್ಷ 120 ಸ್ಥಾನಗಳಲ್ಲಿ ಗೆಲುವು ಸಾದಿಸಿದರೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದರು.








