ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಸಮುದ್ರ ಸೇತು’ ಹೀರೋ ‘ INS ಜಲಾಶ್ವ ‘..! SALUTE TO INDIAN ARMY

Namratha Rao by Namratha Rao
May 2, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

‘ಸಮುದ್ರ ಸೇತು’ ಹೀರೋ ‘ INS ಜಲಾಶ್ವ ‘..! SALUTE TO INDIAN ARMY

೨೦೧೯ ರ ನವೆಂಬರ್ ಡಿಸೆಂಬರ್ ನಲ್ಲಿ ಕಾಣಿಸಿಕೊಂಡ ಕೋವಿಡ್ ೧೯ ವೈರಸ್ ೨೦೨೦ ರ ಫೆಬ್ರುವರಿಯ ವರೆಗೂ ಚೀನಾಕ್ಕೆ ಸೀಮಿತವಾಗಿತ್ತು. ಕೋವಿಡ್ ರೋಗ ಮಾರ್ಚ್ 28ರ ವೇಳೆಗೆ ಜಗತ್ತಿನ 177 ರಾಷ್ಟ್ರಗಳಲ್ಲಿ ವ್ಯಾಪಿಸಿ 6.21 ಲಕ್ಷ ಜನರು ಕೋವಿಡ್-19ರ ಸೋಂಕಿಗೆ ಒಳಗಾದ ಪ್ರಕರಣಗಳು ದಾಖಲಾಗಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಯಾಯಿತು. ಬಳಿಕ ಎಲ್ಲೆಡೆ ಕೋವಿಡ್ ಮೊದಲ ಅಲೆ ಆರಂಭವಾಯಿತು. ವೈರಸ್ ಹರಡುವಿಕೆಯ ನಿಯಂತ್ರಣಕ್ಕೆ ಹಲವು ದೇಶಗಳು ಲಾಕ್ಡೌನ್ ಹೇರಲು ಆರಂಭಿಸಿದವು.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಈ ವೇಳೆ ವಿದೇಶಗಳಲ್ಲಿ ಲಕ್ಷಾಂತರ ಭಾರತೀಯರು ಭಾರತಕ್ಕೆ ಬರಲಾಗದೇ ಸಿಲುಕಿ ಸಂಕಷ್ಟದಲ್ಲಿದ್ದರು. ಅರೆ.. ಭಾರತೀಯ ನೌಕಾಸೇನೆಯ ನೌಕೆಗಳ‌ಬಗ್ಗೆ ಮಾಹಿತಿ ನೀಡುತ್ತೇವೆಂದು ಇದೆಲ್ಲವನ್ನು ಯಾಕೆ ಹೇಳ್ತಿದಾರೆ ಅಂದುಕೊಂಡ್ರಾ? ಅಸಲು ಏನೆಂದ್ರೆ ಹೀಗೆ ವಿದೇಶಗಳಲ್ಲಿ ಸಹಾಯಹಸ್ತಕ್ಕಾಗಿ ಕಾದು ಕುಳಿತಿದ್ದ ಲಕ್ಷಾಂತರ ಭಾರತೀಯರ ನೆರವಿಗೆ ಬಂದವರಲ್ಲಿ ಭಾರತೀಯ ನೌಕಾಸೇನೆಯೂ ಒಂದು. ಸಮುದ್ರ ಸೇತು ಎಂಬ ಅಭಿಯಾನದ ಮೂಲಕ ಲಕ್ಷ ಲಕ್ಷ ಭಾರತೀಯರನ್ನು ತಾಯ್ನಾಡಿಗೆ ಹೊತ್ತು ತಂದಿದ್ದು ನೌಕಾಸೇನೆಯ ನೌಕೆಗಳು. ಅದರಲ್ಲೂ ಐಎನ್ಎಸ್ ಜಲಾಶ್ವ ಸಮುದ್ರ ಸೇತು ಅಭಿಯಾನದ ಹೀರೋ ಎಂದರೆ ತಪ್ಪಾಗಲಾಗದು.

ಪ್ರಸ್ತುತ ಭಾರತೀಯ ನೌಕಾ ಸೇನೆಯ ಸೇವೆಯಲ್ಲಿರುವ ಐ.ಎನ್.ಎಸ್ ಜಲಾಶ್ವ ನೌಕೆಯು ಮೊದಲು ಯು.ಎಸ್.ಎಸ್ ಟ್ರೆಂಟಾನ್ ಎಂದು ಕರೆಯಲ್ಪಡುತ್ತಿತ್ತು. ಈ ನೌಕೆಯನ್ನು ಭಾರತವು ೪೮ ಮಿಲಿಯನ್ ಯು.ಎಸ್. ಡಾಲರ್’ಗಳಿಗೆ ಅಮೇರಿಕಾದಿಂದ ಖರೀದಿಸಿತು. ೨೦೦೭ರಲ್ಲಿ ಕಾರ್ಯಾರಂಭಿಸಿದ ಇದು ಭಾರತೀಯ ನೌಕಾ ಸೇನೆಯ ಎರಡನೆಯ ಬೃಹತ್ ನೌಕೆಯಾಗಿದೆ.

ವಿಶಾಖಪಟ್ಟಣದ ನೌಕಾ ನೆಲೆಗೆ ೧೨ ಸಪ್ಟೆಂಬರ್, ೨೦೦೭ರಂದು ಆಗಮಿಸಿದ ಇದು ಭಾರತೀಯ ನೌಕಾ ಸೇನೆಯ ಪೂರ್ವ ಭಾಗಕ್ಕೆ ನಿಯೋಜನೆಗೊಂಡಿತು.ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ವಿದೇಶದಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ವಾಪಸ್ ಕರೆತರುವ ವಂದೇ ಭಾರತ್‌ ಮಿಷನ್‌ ಕಾರ್ಯಾಚರಣೆ ಅಂಗವಾಗಿ ‘ಸಮುದ್ರ ಸೇತು’ ಕಾರ್ಯಾಚರಣೆಯ ಎರಡನೇ ಹಂತದ ಅಡಿಯಲ್ಲಿ ಭಾರತೀಯ ನೌಕಾಪಡೆಯ ಹಡಗು ಐಎನ್ಎಸ್ ಜಲಾಶ್ವ ಹತ್ತಾರು ದೇಶಗಳಿಗೆ ತೆರಳಿ‌ ನಮ್ಮವರನ್ನು ಸೇಫ್ ಆಗಿ ಮರಳಿಸಿತು.

ಮಾಲ್ಡೀವ್ಸ್, ಸಿಂಗಾಪುರ್, ಅರಬ್ ದೇಶಗಳು, ಥಾಯ್ಲೆಂಡ್ ಸೇರಿದಂತೆ ಕೆಲ ದೇಶಗಳಿಗೆ ಐಎನ್ಎಸ್ ಜಲಾಶ್ವ ತೆರಳಿತ್ತು. ಇಷ್ಟೇ ಅಲ್ಲದೇ, ಎರಡನೇ ಕರೋನಾ ಅಲೆಗೆ ತತ್ತಿರಿಸಿದ ಭಾರತಕ್ಕೆ ಬೇಕಾದ ಆಕ್ಸಿಜನ್ ತರಲು ನಿಯೋಜಿಸಿದ ನೌಕೆಗಳಲ್ಲಿ ಐಎನ್ಎಸ್ ಜಲಾಶ್ವ ಮುಂದಾಳತ್ವ ವಹಿಸಿದೆ. ವಿದೇಶಗಳಿಂದ ವೈದ್ಯಕೀಯ ಆಮ್ಲಜನಕ (ಆಕ್ಸಿಜನ್) ತರುವ ಸಲುವಾಗಿ ಭಾರತೀಯ ನೌಕಾಪಡೆಯು ಯುದ್ಧನೌಕೆಗಳನ್ನು ನಿಯೋಜನೆ ಮಾಡಿದೆ.

ಮೊದಲ ಹಂತದಲ್ಲಿ ಬಹ್ರೈನ್, ಸಿಂಗಾಪುರ ಮತ್ತು ಥಾಯ್ಲೆಂಡ್‌ಗಳಿಂದ ಆಮ್ಲಜನಕ ತರಲು ನೌಕೆಗಳನ್ನು ನಿಯೋಜಿಸಲಾಗಿದೆ. ಮುಂಬೈಗೆ 40 ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕ ತರುವ ಸಲುವಾಗಿ ಐಎನ್‌ಎಸ್ ಕೋಲ್ಕತ್ತ ಮತ್ತು ಐಎನ್‌ಎಸ್ ತಲ್ವಾರ್‌ಗಳು ಈಗಾಗಲೇ ಬಹ್ರೈನ್‌ನ ಮನಾಮ ಬಂದರು ತಲುಪಿವೆ. ಐಎನ್‌ಎಸ್ ಜಲಾಶ್ವ ಬ್ಯಾಂಕಾಂಕ್ ತಲುಪಿದ್ದು, ಐಎನ್‌ಎಸ್ ಐರಾವತ್ ಸಿಂಗಾಪುರಕ್ಕೆ ತೆರಳಿದೆ.

‘ದೇಶದ ಆಮ್ಲಜನಕ ಬೇಡಿಕೆ ಪೂರೈಸುವ ಸಲುವಾಗಿ ಭಾರತೀಯ ನೌಕಾಪಡೆಯು ‘ಆಪರೇಷನ್ ಸಮುದ್ರ ಸೇತು–2 ಹಮ್ಮಿಕೊಂಡಿದೆ’ ಎಂದು ನೌಕಾಪಡೆ ಹೇಳಿದೆ. ಹೀಗೆ ನೌಕಾಪಡೆಯ ಐಎನ್ಎಸ್ ಜಲಾಶ್ವ ಕೇವಲ ಜಲಮಾರ್ಗದ ಕಂಟಕಗಳನ್ನು ತಡೆಯದೇ ಸಹಸ್ರ ಭಾರತೀಯರನ್ನು ತಾಯ್ನಾಡಿಗೆ ಕರೆತಂದು ಹೀರೋ ಎನಿಸಿದೆ.

Tags: indiaINDIAN ARMYmilitarysalute to indian armysoilders
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram