ಮದುವೆ ಸಮಾರಂಭದಲ್ಲಿ ಮಾಜಿ ಯೋಧನಿಂದ ಗಾಳಿಯಲ್ಲಿ ಗುಂಡು
ಮದುವೆ ಸಮಾರಂಭದಲ್ಲಿ ಮಾಜಿ ಸೈನಿಕನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿದ್ದಾನೆ. ಈತನ ನಡೆ ಕಂಡು ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು ದಂಗಾಗಿದ್ದಾರೆ. ಮದುವೆ ಸಮಾರಂಭದಲ್ಲಿ ಮಾಜಿ ಯೋಧ ಗಾಳಿಯಲ್ಲಿ ಗುಂಡಿನ ಸುರಿಮಳೆಗೈದಿರುವ ವಿಡಿಯೋ ವೈರಲ್ ಆಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಆಯೋಜಿಸಿದ್ದ ಮದುವೆ ಸಮಾರಂಭದಲ್ಲಿ, ರಫಿಕ್ ಅಹಮ್ಮದ ತಹಶೀಲ್ದಾರ ಎಂಬ ಮಾಜಿ ಯೋಧ ಗುಂಡು ಹಾರಿಸಿದ್ದಾನೆ.
ತನ್ನ 9.62 mmನ ಲೈಸೆನ್ಸ್ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಮದುವೆ ಸಮಾರಂಭದ ಖುಷಿಯಲ್ಲಿ 5 ಸುತ್ತು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ. ಮಾಜಿ ಸೈನಿಕನ ಹುಚ್ಚಾಟದಿಂದ ಮದುವೆಗೆ ಆಗಮಿಸಿದ್ದ ಸಂಬಂಧಿಗಳು ದಂಗಾಗಿದ್ದಾರೆ. ವಿಷಯ ತಿಳಿದ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಜಿ ಸೈನಿಕನ ವಿರುದ್ದ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Ex Army Person Gun Fire Bullet Fire in Chikkodi at Marriage Function