ex-cm-sm-krishna | ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಅವರಿಗೆ ನಿನ್ನೆ ಸಂಜೆ ತೀವ್ರ ಜ್ವರ, ತಲೆ ನೋವು ಎದುರಾಗಿದೆ.

ಈ ಹಿನ್ನೆಲೆಯಲ್ಲಿ ನಗರದ ಹೆಚ್ ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದು, ಎಸ್.ಎಂ.ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಆತಂಕವಿಲ್ಲ ಎಂದು ದೃಢಪಡಿಸಿದ್ದಾರೆ.
ಅವರಿಗೆ ಜ್ವರ ಕಡಿಮೆಯಾದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ.








