HDK vs Ramesh kumar | ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ
ಬೆಂಗಳೂರು : ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಕೋಲಾರದಲ್ಲಿ ನಡೆದ ಸಿದ್ದರಾಮೋತ್ಸವ ಪೂರ್ವಭಾವಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಗಲಾಟೆ ನಡೆದಿದೆ. ಇದನ್ನ ಚಿತ್ರೀಕರಣ ಮಾಡುವ ವೇಳೆ ಮಾಧ್ಯಮ ಪ್ರತಿನಿಧಿಗಳ ಮೇಲೆ ರಮೇಶ್ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರು ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.ಸಂವಿಧಾನದ 4ನೇ ಅಂಗ ಮಾಧ್ಯಮ ಎನ್ನುವುದು ಸ್ವಯಂ ಘೋಷಿತ ಸಂವಿಧಾನ ಪಂಡಿತರಿಗೆ ಗೊತ್ತಿಲ್ಲದಿರುವುದು ವಿಪರ್ಯಾಸ.
https://twitter.com/hd_kumaraswamy/status/1553246365228023809?s=20&t=-hDkdnsTe9MDhJ4UiH_geA
ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ, ಸ್ವಾತಂತ್ರೋದ್ಯಾನದಲ್ಲಿ ನಾಯಕರ ಸಾಕ್ಷಿಯಾಗಿ 3-4 ತಲೆಮಾರುಗಳಿಗಾಗುವಷ್ಟು ಲೂಟಿ ಹೊಡೆದ ಲೆಕ್ಕ ಕೊಟ್ಟ ವ್ಯಕ್ತಿಯ ಅಸಲಿರೂಪ ಅನಾವರಣವಾಗಿದೆ ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.








