HDK | ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ  

1 min read

HDK | ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ  

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ  ಕಿಡಿಕಾರಿದ್ದಾರೆ.

ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು, ಇದಕ್ಕೆ ಹೆಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ತಮ್ಮ ಟ್ವೀಟ್ ನಲ್ಲಿ.. ಪ್ರಾದೇಶಿಕ ಪಕ್ಷಗಳಿಗೆ ಸೈದ್ಧಾಂತಿಕ ಬದ್ಧತೆ ಇಲ್ಲ..ಹೀಗೆಂದು ಕಾಂಗ್ರೆಸ್ ಚಿಂತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ರಾಹುಲ್ ಗಾಂಧಿ ವ್ಯಾಖ್ಯಾನ ಮಾಡಿದ್ದಾರೆ. ಹಾಗಾದರೆ, ಸೈದ್ಧಾಂತಿಕ ಬದ್ಧತೆ ಎಂದರೆ ಏನು?  ರಾಹುಲ್‌ಗಾಂಧಿ ಅವರು ಪ್ರಾದೇಶಿಕ ಪಕ್ಷಗಳಿಗೆ ಸ್ವಲ್ಪ ಬಿಡಿಸಿ ಹೇಳಬೇಕು.

ex cm h d kumaraswamy slams rahul gandhi saaksha tv
ex cm h d kumaraswamy slams rahul gandhi saaksha tv

ಸೈದ್ಧಾಂತಿಕ ಬದ್ಧತೆ ಎಂದರೆ..ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಹಿನ್ನೆಲೆಯ ನೆಪ ನೀಡಿ, ಡಿಎಂಕೆ-ಎಲ್‌ಟಿಟಿಇ ಸಂಬಂಧವನ್ನು ಮುನ್ನೆಲೆಗೆ ತಂದು ಆ ಪಕ್ಷವನ್ನು ಸಂಪುಟದಿಂದ ಹೊರಗಿಡಬೇಕು ಎಂದ್ಹೇಳಿ ಐ.ಕೆ.ಗುಜ್ರಾಲ್‌ ನೇತೃತ್ವದ ಸಂಯುಕ್ತ ರಂಗ ಸರಕಾರವನ್ನು ಉರುಳಿಸಿದ ಕಾಂಗ್ರೆಸ್‌ ಪಕ್ಷವು ಆಮೇಲೆ ಅದೇ ಪಕ್ಷದ ಹೆಗಲ ಮೇಲೆ ಕೈ ಹಾಕಿದ್ದಾ!?

ಯುಪಿಎ 1 & 2 ಸರಕಾರಗಳಲ್ಲಿ ಡಾ.ಮನಮೋಹನ್‌ ಸಿಂಗ್‌ ನೇತೃತ್ವದ ಸಂಪುಟದಲ್ಲಿ ಅದೇ ಡಿಎಂಕೆಯ ಜತೆ 10 ವರ್ಷ ಅಧಿಕಾರದ ಸೋಪಾನ ಹಂಚಿಕೊಂಡಿದ್ದು ಸೈದ್ಧಾಂತಿಕ ಬದ್ಧತೆಯಾ?

ಬಿಜೆಪಿ ಸೋಲಿಸುವ ಶಕ್ತಿ ಕಾಂಗ್ರೆಸ್‌ʼಗೆ ಮಾತ್ರ ಇದೆ ಎನ್ನುವ ರಾಹುಲ್‌ ಗಾಂಧಿ ಅವರು, ತಮ್ಮ ಪಕ್ಷ 10 ವರ್ಷ ಅಧಿಕಾರದ ಸುಖ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ಶಕ್ತಿ ಮತ್ತು ದಾಕ್ಷಿಣ್ಯದಿಂದ ಎನ್ನುವುದನ್ನು ಮರೆಯಬಾರದು.

ಮೈತ್ರಿ ಸರಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರಕಾರವನ್ನೂ ಮಾಡಿ ಹಿಂಬಾಗಿಲಿನಿಂದ ಆಪರೇಷನ್‌ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ʼಕೈʼಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ? ಮಿತ್ರಪಕ್ಷಗಳನ್ನೇ ನುಂಗಿಹಾಕುವುದೂ ಸೈದ್ಧಾಂತಿಕ ರಾಜಕಾರಣವಾ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಪ್ರಾದೇಶಿಕ ಪಕ್ಷಗಳ ಭೀತಿ ಎದುರಿಸುತ್ತಿರುವ ಫೋಬಿಯಾದಲ್ಲಿರುವ ಕಾಂಗ್ರೆಸ್; ಆಂಧ್ರ, ತೆಲಂಗಾಣ‌, ಒಡಿಶಾ ಸೇರಿದಂತೆ ಯಾವ ರಾಜ್ಯಗಳಲ್ಲಿ ಹೇಳಹೆಸರಿಲ್ಲದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊನೆಗಾಲದಲ್ಲಿದೆ. ಇದನ್ನು ರಾಹುಲ್‌ಗಾಂಧಿ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಹೆಚ್ ಡಿಕುಮಾರಸ್ವಾಮಿ ಕುಟುಕಿದ್ದಾರೆ. ex cm h d kumaraswamy slams rahul gandhi

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd