ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಅವರ ಆಸ್ತಿ ಘೋಷಣೆ ಮಾಡಿದ್ದು, ಪತ್ನಿ ಪಾರ್ವತಿ ಅವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.
ಸಿದ್ದರಾಮಯ್ಯ ಅವರ ಬಳಿ 19 ಕೋಟಿ ರೂ. ಆಸ್ತಿ ಇದ್ದರೆ, ಅವರ ಪತ್ನಿಯ ಬಳಿ 32.12 ಕೋಟಿ ರೂ. ಆಸ್ತಿ ಇದೆ.
ಸಿದ್ದರಾಮಯ್ಯ ಅವರು 9,58 ಕೋಟಿ ಚರಾಸ್ತಿ, 9.43 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 11.26 ಕೋಟಿ ರೂ. ಚರಾಸ್ತಿ, 19.56 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದು, 1.29 ಕೋಟಿ ರೂ. ಪಿತ್ರಾರ್ಜಿತವಾಗಿ ಬಂದಿದೆ. 16.24 ಕೋಟಿ ರೂ. ಸಾಲ ಇದೆ.
ಸಿದ್ದರಾಮಯ್ಯ ಕೂಡ 6.84 ಕೋಟಿ ರೂ. ಸಾಲ ಘೋಷಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು 2018ರ ಚುನಾವಣೆ ಕಾಲಕ್ಕೆ 18.55 ಕೋಟಿ ರೂ. ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ರ್ಯಾಲಿಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ನಾಯಕರು ಇದ್ದರು.