H.D.Kumaraswamy | ಉತ್ತಕ ಕನ್ನಡ ಜಿಲ್ಲೆಯ ಹೋರಾಟಕ್ಕೆ ಹೆಚ್ ಡಿಕೆ ಬೆಂಬಲ
ಬೆಂಗಳೂರು : ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ಟ್ವಿಟ್ಟರ್ ಮೂಲಕ ಅಭಿಯಾನ ಆರಂಭಿಸಿದ್ದು, ಇದಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ & ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ @BSBommai & ಆರೋಗ್ಯ ಸಚಿವ ಶ್ರೀ @mla_sudhakar ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ. 2/6
— H D Kumaraswamy (@hd_kumaraswamy) July 25, 2022
ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಶ್ರೀ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.