ಬೆಂಗಳೂರು: ಜಾರಿ ನಿರ್ದೇಶನಾಲಯದ ವಿರುದ್ಧ 2022 ರಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
ಇಬ್ಬರು ನಾಯಕರ ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಜಾರಿ ನಿರ್ದೇಶನಾಲಯದ ವಿರುದ್ಧ 2022 ರ ಆಗಸ್ಟ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವೀರಪ್ಪ ಮೊಯ್ಲಿ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿ ಮಾಡಲಾಗಿದೆ.