Siddaramaiah | ಬೊಮ್ಮಾಯಿ ಅವರೇ ಇತಿಹಾಸದ ವ್ಯಸನದಲ್ಲಿ ಮೈಮರೆಯಬೇಡಿ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ ಸರಿಯಾದ ಮಾಹಿತಿ ತರಿಸಿಕೊಳ್ಳಿ. ಇತಿಹಾಸದ ವ್ಯಸನದಲ್ಲಿ ಮೈಮರೆಯಬೇಡಿ ಎಂದು ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ನೆಹರೂ ಅವರೊಂದಿಗೆ ಮೋದಿ ಹೋಲಿಕೆ ಸಾಧ್ಯವೇ ಇಲ್ಲ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವಿಟ್ಟರ್ ನಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಆಧುನಿಕ ಸಂಶೋಧನಾ ಸಂಸ್ಥೆಗಳ ಸ್ಥಾಪನೆ ಮೂಲಕ ಸಂವಿಧಾನದ ಆಶಯವಾದ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶ್ರಮಿಸಿದವರು ಪಂಡಿತ ನೆಹರೂ. ಪ್ಲಾಸ್ಟಿಕ್ ಸರ್ಜರಿ, ಚರಂಡಿ ನೀರಿನಿಂದ ಗ್ಯಾಸ್, ಪೆನ್ ಡ್ರೈವ್ ಗಳ ಹೇಳಿಕೆಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ನಗೆಪಾಟಲಿಗೀಡಾದವರು ಯಾರೆಂದು ನಿಮಗೆ ಗೊತ್ತಿಲ್ಲವೇ?
https://twitter.com/siddaramaiah/status/1530911920282144768?s=20&t=YauJnu19F98goZWo-U9ZzA
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ ಸರಿಯಾದ ಮಾಹಿತಿ ತರಿಸಿಕೊಳ್ಳಿ. ಇತಿಹಾಸದ ವ್ಯಸನದಲ್ಲಿ ಮೈಮರೆಯಬೇಡಿ. ವರ್ಷದ ಹಿಂದೆ ಚೀನಾ ದೇಶದ ಎದುರು ಭಾರತ ಮಂಡಿ ಊರುವಂತೆ ಮಾಡಿ ಭಾರತೀಯರು ತಲೆ ತಗ್ಗಿಸುವಂತೆ ಮಾಡಿದ್ದು ಯಾರೆಂದು ನಿಮಗೆ ಗೊತ್ತಿಲ್ಲವೇ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಭಾರತ ಚೀನಾ ಗಡಿಯನ್ನು ಆ ದೇಶದ ಬೇಡಿಕೆಯಂತೆ 1959ರ ಗಡಿರೇಖೆಗೆ ಒಪ್ಪಿಕೊಂಡು ರಾಜಿ ಮಾಡಿಕೊಂಡಿದ್ದು ಇತ್ತೀಚಿನ ಇತಿಹಾಸ. ಗಾಲ್ವಾನ್ ಕಣಿವೆಯಲ್ಲಿ ನಮ್ಮ ಸೈನಿಕರನ್ನು ಲಾಠಿ, ದೊಣ್ಣೆಗಳಿಂದ ಕಾದಾಡುವಂತೆ ಮಾಡಿದ್ದನ್ನು ಕೂಡಾ ದೇಶದ ಜನ ಮರೆತಿಲ್ಲ.
https://twitter.com/siddaramaiah/status/1530911743693578240?s=20&t=YauJnu19F98goZWo-U9ZzA
ಪಾಕಿಸ್ಥಾನ ಎಂಬ ದುರ್ಬಲ ದೇಶದ ಎದುರು ವೀರಾವೇಶ ಮೆರೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪಾಕಿಸ್ಥಾನಕ್ಕಿಂತ ದೊಡ್ಡ ಶತ್ರುವಾದ ಚೀನಾದ ಹೆಸರನ್ನು ಉಚ್ಚರಿಸಲು ಕೂಡಾ ಅಂಜುವುದು ಯಾಕೆ ಎಂದು ಹೇಳಬಲ್ಲಿರಾ ಬಸವರಾಜ ಬೊಮ್ಮಾಯಿ ಅವರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.








