Siddaramaiah | ನಮ್ಮ ಧ್ವನಿ ಹತ್ತಿಕ್ಕಲು ನಿಮ್ಮಿಂದ ಸಾಧ್ಯವೇ ಮಿಸ್ಟರ್ ಮೋದಿ
ಬೆಂಗಳೂರು : ನಮ್ಮೆಲ್ಲರ ಧ್ವನಿಯನ್ನು ಹತ್ತಿಕ್ಕಲು ನಿಮ್ಮಿಂದ ಸಾಧ್ಯವೇ ಮಿಸ್ಟರ್ ನರೇಂದ್ರ ಮೋದಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ 2ನೇ ದಿನದ ವಿಚಾರಣೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದು, ವಿಚಾರಣೆ ಮುಂದುವರೆದಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಎಂದಿಗೂ ಪಾಲ್ಗೊಳ್ಳದ, ತ್ಯಾಗ, ಬಲಿದಾನದ ಅರ್ಥವೇ ಗೊತ್ತಿರದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದ ದೇಶಪ್ರೇಮವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ನರೇಂದ್ರ ಮೋದಿ ಅವರು ಹೇಳುವ “ನ ಖಾವೂಂಗ, ನಾ ಖಾನೇದೂಂಗ” ನಿಜವೇ ಆಗಿದ್ದರೆ 40% ಕಮಿಷನ್ ಲೂಟಿ ಮಾಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ಸಾಲು ಸಾಲು ಹಗರಣಗಳ ಕುರಿತು ಇ.ಡಿ, ಐ.ಟಿ ತನಿಖೆ ನಡೆಸಲಿ.
ನಮ್ಮ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ನ ಅಸಂಖ್ಯ ಕಾರ್ಯಕರ್ತರು, ಕೋಟ್ಯಂತರ ಭಾರತೀಯರು ಇದ್ದಾರೆ. ನಮ್ಮೆಲ್ಲರ ಧ್ವನಿಯನ್ನು ಹತ್ತಿಕ್ಕಲು ನಿಮ್ಮಿಂದ ಸಾಧ್ಯವೇ ಮಿಸ್ಟರ್ ನರೇಂದ್ರ ಮೋದಿ
ಸದಾಕಾಲ ಬಿಜೆಪಿಯ ರಾಜಕೀಯ ವಿರೋಧಿಗಳನ್ನೇ ಗುರಿಯಾಗಿರಿಸಿಕೊಂಡು ದಾಳಿ ಮಾಡುವ ಇ.ಡಿ ಹಾಗೂ ಐ.ಟಿ ಇಲಾಖೆಗಳನ್ನು ಬಿಜೆಪಿ ಪಕ್ಷದ ಜೊತೆಗೆ ವಿಲೀನ ಮಾಡಿಬಿಡಿ.ನೀವು ಅಧಿಕಾರಕ್ಕೆ ಬಂದಮೇಲೆ ಇವು ಸ್ವಾಯತ್ತ ಸಂಸ್ಥೆಗಳಂತೆ ಒಮ್ಮೆಯಾದರೂ ಕೆಲಸ ಮಾಡಿವೆಯೇ ನರೇಂದ್ರ ಮೋದಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.