ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ…. | Siddaramaiah ಆಕ್ರೋಶ
ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮಕ್ಕಳು ಶಾಲೆಗೆ ಬರುವುದು ಶೂ, ಸಾಕ್ಸ್ ಗಾಗಿ ಅಲ್ಲ. ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಆಧ್ಯತೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದರು. ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಆಕ್ರೋಶ ಹೊರಹಾಕಿದ್ದರು.
ಇದರಿಂದ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು 132 ಕೋಟಿ ಬಿಡುಗಡೆಗೆ ಅನುಮೋದನೆ ನೀಡಿದ್ದಾರೆ.
ಈ ಕುರಿತು ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿದ್ದೆ ಬಿಡಿಸಬೇಕಾದರೆ ನಾವು ಎಚ್ಚರಿಸಬೇಕಾಯಿತು.
ಬಡ ಶಾಲಾ ಮಕ್ಕಳಿಂದ ಶೂ-ಸಾಕ್ಸ್ಗಳನ್ನೂ ಕಿತ್ತುಕೊಳ್ಳಲು ಹೊರಟಿದ್ದ ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಮಾಡುತ್ತಿರುವ ಎಡವಟ್ಟುಗಳು ಒಂದೋ, ಎರಡೋ?
ಮೊದಲು ಈ ಶಿಕ್ಷಣ ವಿರೋಧಿಯನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.