Siddaramaiah | ಟಿಪ್ಪು ಎಂದಾಗ ಮೊದಲು ಮೈಮೇಲೆ ಬಂದದ್ದು ಬಿಜೆಪಿಗರಿಗೆ
ಬೆಂಗಳೂರು : ಟಿಪ್ಪು ಸುಲ್ತಾನ್ ಎಂದಾಗ ಮೊದಲು ಮೈಮೇಲೆ ಬಂದದ್ದು ಬಿಜೆಪಿ ನಾಯಕರಿಗೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.
ಟಿಪ್ಪು ಅಂದ್ರೆ ಸಿದ್ದರಾಮಯ್ಯ ಮೈಮೇಲೆ ಬಂದಾಗೆ ಆಡ್ತಾರೆ ಎಂಬ ಆರ್,ಅಶೋಕ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ… ಟಿಪ್ಪು ಸುಲ್ತಾನ್ ಎಂದಾಗ ಮೊದಲು ಮೈಮೇಲೆ ಬಂದದ್ದು ಬಿಜೆಪಿ ನಾಯಕರಿಗೆ.
ಹತ್ತು ವರ್ಷಗಳ ಹಿಂದೆ ಈ ರೀತಿ ಮೈಮೇಲೆ ಬಂದಾಗಲೇ ಅಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಡಾ.ಶೇಖ್ ಅಲಿ ಅವರಿಂದ 425 ಪುಟಗಳ ಪುಸ್ತಕ ಬರೆಸಿ ಸರ್ಕಾರದಿಂದಲೇ ಪ್ರಕಟಿಸಿದ್ದು ಆರ್. ಅಶೋಕ್.
https://twitter.com/siddaramaiah/status/1539982388326850561?s=20&t=u8yaWWmm-taM8FxtAYGPiA
ಟಿಪ್ಪು ಸುಲ್ತಾನ್ ಎಂದ ಕೂಡಲೇ ಉರಿದುಬೀಳುವ ಆರ್.ಅಶೋಕ್ ಅವರೂ ಸೇರಿದಂತೆ ಬಿಜೆಪಿಯ ನಾಯಕರೆಲ್ಲರೂ ಮೊದಲು ಅವರ ಸರ್ಕಾರವೇ ಟಿಪ್ಪು ಬಗ್ಗೆ ಬರೆಸಿ, ಪ್ರಕಟಿಸಿದ್ದ ಪುಸ್ತಕ ಮತ್ತು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಗೋವಿಂದ ಕಾರಜೋಳ ಅವರು ಟಿಪ್ಪುವನ್ನು ಹಾಡಿ ಹೊಗಳಿದ ಮುನ್ನುಡಿಯನ್ನು ಓದಬೇಕು.
ಟಿಪ್ಪುವಿನ ರಾಷ್ಟ್ರೀಯ ರಾಜ್ಯದ ಕಲ್ಪನೆ, ಸಮರ ಕಲೆ, ಸುಧಾರಣೆಯ ಹುರುಪು, ಟಿಪ್ಪುವನ್ನು ಎಣೆಯಿಲ್ಲದ ನಾಯಕನನ್ನಾಗಿ ಮಾಡಿದೆ’’ ಎಂದು ತಾವೇ ಪ್ರಕಟಿಸಿದ್ದ ಪುಸ್ತಕದಲ್ಲಿ ಹಾಡಿ ಹೊಗಳಿದವರು ಆಗಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಸಚಿವ ಗೋವಿಂದ ಕಾರಜೋಳ ಅವರು. ಆಗ ತಾವೆಲ್ಲಿ ಅಡಗಿ ಕೂತಿದ್ದಿರಿ ಆರ್. ಅಶೋಕ್ ಎಂದು ಕುಟುಕಿದೆ.








