ಕೇಂದ್ರ ಬಜೆಟ್ ವಿರುದ್ಧ ಮಾಜಿ ಸಿಎಂ ಅಸಮಾಧಾನ Saaksha Tv
ರಾಮನಗರ: ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕ್ಕೊಳ್ಳಿ ರೀತಿ ಇದೆ ಈ ಕೇಂದ್ರ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದರು.
ರಾಮನಗರದ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಾವರಿ ಯೋಜನೆಗಳನ್ನು ಜೋಡಿಸುವ ಪ್ರಸ್ತಾವನೆಯನ್ನು ಬಜೆಟ್ನಲ್ಲಿ ಹೇಳಲಾಗಿದೆ. ಆದರೆ 3 ವರ್ಷಗಳಿಂದ ನೀರಾವರಿ ಯೋಜನೆಗಳು ಹಾಗೆಯೇ ಇವೆ. ಅವೆಲ್ಲಾ ಎಷ್ಟರ ಮಟ್ಟಿಗೆ ಕಾರ್ಯಾರಂಭಕ್ಕೆ ಬರುತ್ತದೆ ಅನ್ನೋದನ್ನು ನೋಡಬೇಕು ಎಂದರು.
ಟ್ಯಾಕ್ಸ್ಗಳನ್ನು ಹೆಚ್ಚಿನ ರೀತಿಯಲ್ಲಿ ಹಾಕಿಲ್ಲ ಅನ್ನೋದನ್ನು ಬಿಟ್ಟರೆ, ಆರ್ಥಿಕತೆ ಸುಧಾರಣೆ ಬಗ್ಗೆ ಯಾವ ಕ್ರಮಕೈಗೊಂಡಿಲ್ಲ. ಯಾವುದೇ ರೀತಿಯ ಹೊಸ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳಿಲ್ಲ ಎಂದು ಕುಮಾರಸ್ವಾಮಿ ಹೇಳಿದರು









