ನವದೆಹಲಿ: ನೂತನ ಹೊಸ ಅಬಕಾರಿ ನೀತಿಯಲ್ಲಿ (Liquor Scam Case) ಅಕ್ರಮ ಹಣ ವರ್ಗಾವಣೆ ಅಕ್ರಮ ನಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ ಬಂಧಿಯಾಗಿರುವ ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ತಮ್ಮ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಿದ್ದಾರೆ.
ಕೋರ್ಟ್ ಅನುಮತಿಯ ಹಿನ್ನೆಲೆಯಲ್ಲಿ ಅವರು ಅವರು ತಮ್ಮ ನಿವಾಸಕ್ಕೆ ಆಗಮಿಸಿ ಪತ್ನಿಯ ಆರೋಗ್ಯ ವಿಚಾರಿಸಿದರು. ಸಿಸೋಡಿಯಾ ಅವರು ತಿಹಾರ್ ಜೈಲಿನಲ್ಲಿ (Tihar Jail) ಇದ್ದರು. ದೆಹಲಿ ನ್ಯಾಯಾಲಯವು ಶುಕ್ರವಾರ ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ಪತ್ನಿಯನ್ನು ಭೇಟಿಯಾಗಲು ಅನುಮತಿ ನೀಡಿತ್ತು. ಆದರೆ, ಈ ಅವಧಿಯಲ್ಲಿ ಯಾವುದೇ ರಾಜಕೀಯ ಚಟುವಟಿಕೆ ಹಾಗೂ ಮಾಧ್ಯಮದೊಂದಿಗೆ ಮಾತನಾಡದಂತೆ ನ್ಯಾಯಾಲಯ ಸೂಚಿಸಿತ್ತು.
ಸಿಸೋಡಿಯಾ ತಮ್ಮ ಪತ್ನಿಯನ್ನು ಭೇಟಿ ಮಾಡಲು ಐದು ದಿನಗಳ ಕಾಲ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ತಮ್ಮ ಪತ್ನಿ ಮಲ್ಟಿಪಲ್ ಸ್ಕ್ಲೆರೋಸಿಸ್ ಮತ್ತು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.