ಚಂಡೀಗಢ: ಮಾಜಿ ಶಾಸಕರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಜಜ್ಜರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಪರಿಚಿತ ಬಂಧೂಕುಧಾರಿಗಳು ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ಹಾಗೂ ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ನಫೆ ಸಿಂಗ್ ರಾಠಿ ಹತ್ಯೆಯಾಗಿರುವ ಮಾಜಿ ಶಾಸಕ. ಇವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಂದೂಕುಧಾರಿಗಳು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮಾಜಿ ಶಾಸಕರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತಿಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ದಾಳಿ ನಡೆಯುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಫೆ ಸಿಂಗ್ ರಾಠಿ ಅವರು ಬಹದ್ದೂರ್ಗಢದಿಂದ ಐಎನ್ಎಲ್ಡಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ದಾಳಿ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.