ದಾವಣಗೆರೆ: ಮಾಜಿ ಸಚಿವ ರೇಣುಕಾಚಾರ್ಯ ಅವರು ನಿವೃತ್ತ ಯೋಧನ ಮೆರವಣಿಗೆಯ ವಾಹನ ಚಲಾಯಿಸಿ ಗಮನ ಸೆಳೆದಿದ್ದಾರೆ.
ಯೋಧರೊಬ್ಬರು ನಿವೃತ್ತಿ ಹೊಂದಿ ಗ್ರಾಮಕ್ಕೆ ಮರಳಿ ಬಂದಿದ್ದರು. ಈ ವೇಳೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿ, ಗ್ರಾಮದಲ್ಲಿ ಮೆರವಣಿಗೆ ಮಾಡಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಮೆರವಣಿಗೆಯ ವಾಹನವನ್ನು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚಲಾಯಿಸಿ, ಎಲ್ಲರ ಗಮನ ಸೆಳೆದಿದ್ದಾರೆ.
ದಾವಣಗೆರೆ(Davanagere) ಜಿಲ್ಲೆಯ ಹರಿಹರ ತಾಲೂಕಿನ ಯಲವಟ್ಟಿ ಗ್ರಾಮದಲ್ಲಿ ನಡೆದಿದೆ. ಸೇನೆಯಲ್ಲಿ ಕಳೆದ 28 ವರ್ಷಗಳಿಂದ ಸುಬೇದಾರ್ ಆಗಿ ಸೇವೆ ಸಲ್ಲಿಸಿ ಯೋಧ ಎಚ್.ಶಿವಕುಮಾರ್ ಗ್ರಾಮಕ್ಕೆ ಮರಳಿ ಬಂದಿದ್ದರು.








