ಇಸ್ಲಾಮಾಬಾದ್ : ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಭಾಗಿಯಾಗಿ ಅರೆಸ್ಟ್ ಆಗಿದ್ದ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಬಿಡುಗಡೆಯಾಗಿದ್ದಾರೆ.
ಇಸ್ಲಾಮಾದಾಬ್ ಹೈಕೋರ್ಟ್ ಶುಕ್ರವಾರ 2 ವಾರಗಳ ಜಾಮೀನನ್ನು (Bail) ಮಂಜೂರು ಮಾಡಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಅವರು ಬಿಡುಗಡೆಯಾಗಿದ್ದಾರೆ. ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರನ್ನು ಅಲ್ಲಿಯ ಪ್ಯಾರಾ ಮಿಲಿಟರಿ ಪಡೆ ಬಂಧಿಸಿತ್ತು. ಹೀಗಾಗಿ ಅಲ್ಲಿ ತೀವ್ರ ಹಿಂಸಾಚಾರ ನಡೆದಿತ್ತು. ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠ ಅವರ ಬಂಧನವನ್ನು ಕಾನೂನು ಬಾಹಿರ ಎಂದು ಘೋಷಿಸಿ ತಕ್ಷಣವೇ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತ್ತು. ನಂತರ ಇಸ್ಲಾಮಾಬಾದ್ ಹೈಕೋರ್ಟ್ ಖಾನ್ ಜಾಮೀನು ಮಂಜೂರು ಮಾಡಿದೆ.
ಇಮ್ರಾನ್ ಖಾನ್ ಬಂಧನವನ್ನು ವಿರೋಧಿಸಿ ದೇಶಾದ್ಯಂತ ಭಾರೀ ಹಿಂಸಾಚಾರ ನಡೆಸಿದ್ದರು. ದೇಶಾದ್ಯಂತ ನಡೆದಿರುವ ಘರ್ಷಣೆಯಲ್ಲಿ ಹತ್ತರು ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ. ದೇಶಾದ್ಯಂತ ಸಾವಿರಾರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.