ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ವತಿಯಿಂದ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ನಡೆಯಲಿದೆ ಎನ್ನಲಾಗುತ್ತದೆ.
AIIMS ಶಿಕ್ಷಕರು ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವುದರೊಂದಿಗೆ ಸದ್ಯ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳನ್ನು ಸಹ ಸಿದ್ದಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಬಹು-ಆಯ್ಕೆಯ ಪ್ರಶ್ನೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಇದು ಕ್ಲಿನಿಕಲ್ ಕಲಿಕೆಯ ಮೌಲ್ಯಮಾಪನದ ಆಧಾರದ ಮೇಲೆ ಇರುತ್ತದೆ ಎಂದು ಹೇಳಲಾಗುತ್ತದೆ.
ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್ಎಂಸಿ) ಎಐಐಎಂಎಸ್ನೊಂದಿಗೆ ಸಭೆಗಳನ್ನು ನಡೆಸಿದೆ. ಮುಂದಿನ ದಿನದಲ್ಲಿ ಪರೀಕ್ಷೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. NExT 1 ವೈದ್ಯಕೀಯ ಮಂಡಳಿಗಳೊಂದಿಗೆ ತಾತ್ಕಾಲಿಕ ನೋಂದಣಿಗೆ ಆಧಾರವಾಗಿರುತ್ತದೆ. ಇದು ಒಂದು ವರ್ಷದ ಕಡ್ಡಾಯ ಇಂಟರ್ನ್ಶಿಪ್ ಮಾಡಲು ವಿದ್ಯಾರ್ಥಿಗಳಿಗೆ ಸೂಚಿಸಲಾಗುತ್ತದೆ.