ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್ ಪುರದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೌಲ್ವಿ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮದರಸಾದಲ್ಲಿ ಬಿದ್ದಿದ್ದ ಬಾಂಬ್ ನ್ನು ಅಲ್ಲಿದ್ದ ವಿದ್ಯಾರ್ಥಿಯೊಬ್ಬ ಚೆಂಡು ಎಂದು ಎಸೆದಿದ್ದೆ. ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಮೌಲ್ವಿ ಹಾಗೂ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೂಡಲೇ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ರಾಜ್ ಕಿಶೋರ್ ಸಿಂಗ್ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಫೋರೆನ್ಸಿಕ್ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ರಾಜಕಿಶೋರ್ ಸಿಂಗ್ ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಈ ಘಟನೆ ನಡೆದಿದ್ದಕ್ಕೆ ಆತಂಕ ವ್ಯಕ್ತವಾಗುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.