ತಮಿಳುನಾಡಿನ ಕಡಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ – ಏಳು ಜನರ ಸಾವು
ಚೆನ್ನೈ,ಸೆಪ್ಟೆಂಬರ್04: ತಮಿಳುನಾಡಿನ ಕಡಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.
ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆ ಕಡಲೂರಿನ ಕಟ್ಟುಮನ್ನಾರ್ಕೋಯಿಲ್ನಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ. ಅಧಿಕಾರಿಗಳು ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.
ಸ್ಫೋಟದಲ್ಲಿ ಘಟಕದ ಮಾಲೀಕರು ಸೇರಿದಂತೆ ಐದು ಮಹಿಳೆಯರು ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಟೆಂಡರ್ಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ತೊಡಗಿವೆ