ಹಾಸನ : ಜಿಲೆಟಿನ್ gelatin ಗೋದಾಮಿನಲ್ಲಿ ಸ್ಫೋಟ, ಓರ್ವ ಸಾವು
ಹಾಸನ : ಸ್ಫೋಟಕ ತುಂಬಿದ್ದ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಒಬ್ಬ ವ್ಯಕ್ತಿ ಕೊನೆಯುಸಿರೆಳೆದಿರುವ ಘಟನೆ ತಾಲೂಕಿನ ಚಾಕೇನಹಳ್ಳಿಯಲ್ಲಿ ನಡೆದಿದೆ.
27 ವರ್ಷದ ಸಂಪತ್ ಮೃತ ವ್ಯಕ್ತಿಯಾಗಿದ್ದು, ದುರಂತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಒಬ್ಬರನ್ನು ಹಾಸನ ಆಸ್ಪತ್ರೆಗೆ ಮತ್ತೊಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಲ್ಲುಗಣಿಗಾರಿಕೆಗಾಗಿ ಸ್ಫೋಟಕಗನ್ನ ವಿತರಣೆ ಮಾಡುವ ವೇಳೆ ಸ್ಫೋಟ ಸಂಭವಿಸಿದೆ.
ಇದರ ತೀವ್ರತೆಗೆ ಚಾಕೇನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.