ಪಾಕ್ ಮತ್ತು ಅಫ್ಘಾನಿಸ್ತಾನ್ ಗಡಿ ಬಳಿ ಸ್ಪೋಟ – 9 ಮಕ್ಕಳ ಸಾವು
ಸೋಮವಾರ ಮಧ್ಯಾಹ್ನ ಅಫ್ಘಾನಿಸ್ತಾನದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಒಂಬತ್ತು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಗಡಿಯಲ್ಲಿ ಸ್ಫೋಟ ಸಂಭವಿಸಿದೆ.
ಇದನ್ನು ದೇಶದಲ್ಲಿ ಅಧಿಕಾರದಲ್ಲಿರುವ ತಾಲಿಬಾನ್ ಸರ್ಕಾರವೂ ದೃಢಪಡಿಸಿದೆ. ನಂಗರ್ಹಾರ್ನಲ್ಲಿ ಆಹಾರ ಪದಾರ್ಥಗಳನ್ನು ಸಾಗಿಸುತ್ತಿದ್ದ ವಾಹನದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಾಲಿಬಾನ್ ಗವರ್ನರ್ ಕಚೇರಿ ಹೊರಡಿಸಿದ ಹೇಳಿಕೆ ತಿಳಿಸಿದೆ. ಈ ವಾಹನದಲ್ಲಿ ಸ್ಪೋಟಕಗಳನ್ನ ಅಡಗಿಸಿಟ್ಟಿದ್ದು, ವಾಹನ ಲಾಲೋಪುರ್ ಜಿಲ್ಲೆಯ ಪೋಸ್ಟ್ ತಲುಪಿದ ಕೂಡಲೇ ಸ್ಫೋಟ ಸಂಭವಿಸಿದೆ ಎಂದು ಕೆಲವು ವರದಿಗಳು ತಿಳಿಸಿವೆ.
ಈ ಪ್ರಾಂತ್ಯವು ತಾಲಿಬಾನ್ ಪ್ರತಿಸ್ಪರ್ಧಿ ಇಸ್ಲಾಮಿಕ್ ಸ್ಟೇಟ್ ಗುಂಪಿನ ಪ್ರಧಾನ ಕಛೇರಿಯಾಗಿದ್ದು, ತಾಲಿಬಾನ್ ದೇಶವನ್ನು ಸ್ವಾಧೀನಪಡಿಸಿಕೊಂಡ ನಂತರ ಅಫ್ಘಾನಿಸ್ತಾನದ ತಾಲಿಬಾನಿಗಳನ್ನ ಗುರಿಯಾಗಿಸಿಕೊಂಡು ಹಲವಾರು ದಾಳಿಗಳನ್ನು ನಡೆಸುತ್ತಿದೆ. ಹೆಚ್ಚಾಗಿ ದೇಶದ ಅಲ್ಪಸಂಖ್ಯಾತ ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ.