ನಕ್ಸಲರು ಅಳವಡಿಸಿಟ್ಟಿದ್ದ ಸ್ಪೋಟಕ ಸ್ಫೋಟಕವಾದ ಪರಿಣಾಮ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ. ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ 21 ವರ್ಷದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಅಲ್ಲದೇ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಸ್ಫೋಟದ ನಂತರ ಓರ್ವ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಗಣಿಗಾರಿಕೆಗೆ ಮೂವರು ಕಾರ್ಮಿಕರು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ರಿತೇಶ್ ಗಗಡಾ ಸಾವನ್ನಪ್ಪಿದ್ದ ವ್ಯಕ್ತಿಯಾಗಿದ್ದು, ಉಮೇಶ್ ರಾಣಾ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರವಣ ಗಗಡಾ (24) ನಾಪತ್ತೆಯಾಗಿರುವ ಕಾರ್ಮಿಕ ಎನ್ನಲಾಗಿದೆ.