ಲಾರಿ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ
ಹುಬ್ಬಳ್ಳಿ : ದೇಶದಲ್ಲಿ ನಿರಂತರವಾಗಿ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಆಗುತ್ತಿರುವುದನ್ನು ಖಂಡಿಸಿ ಇಂದು ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇದಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ನಗರದ ಗಬ್ಬೂರು ಟೋಲ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು.
ಅಲ್ಲದೇ ಹಳೆ ಲಾರಿಗಳನ್ನು ಬಂದ್ ಮಾಡುವ ಕೇಂದ್ರದ ಹಳೆಯ ಕಾನೂನುಗಳನ್ನು ಹಿಂಪಡೆಯಬೇಕು ಅಂತಾ ಒತ್ತಾಯಿಸಿದ್ರು.
ಹಾಗೆ ಥರ್ಡ್ ಪಾರ್ಟಿ ಇನ್ಸೂರೆನ್ಸ್ ಕಡಿಮೆ ಮಾಡಬೇಕು. ಇ-ವೇ ಬಿಲ್ ಹಿಂಪಡೆದು, ಟೋಲ್ ದರ ಕಡಿಮೆ ಮಾಡಬೇಕು ಅಂತಾ ಪ್ರತಿಭಟನಾಕಾರರು ಆಗ್ರಹಿಸಿದರು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ಮಧ್ಯದಲ್ಲಿಯೇ ಪ್ರತಿಭಟನೆ ನಡೆಸಿದರು.
