Covid | ಹೆಚ್ಚುವರಿ ಹಣ ವಸೂಲಿ: 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್
577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್
ಹೆಚ್ಚುವರಿ ಹಣ ವಸೂಲಿ ಮಾಡಿದ ಆಸ್ಪತ್ರೆಗಳು
ಹೆಚ್ಚುವರಿ ಹಣ ಪಡೆದ ಆಸ್ಪತ್ರೆಗಳ ವಿರುದ್ಧ ಕ್ರಮ
ಹಣ ಹಿಂದಿರುಗಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ
ಬೆಂಗಳೂರು : ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ಕೊರೊನಾ ಸೋಂಕಿತ ರೋಗಿಗಳಿಂದಲೂ ಶುಲ್ಕ ವಸೂಲಿ ಮಾಡಿದ ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿ ಮಾಡಲಾಗಿದೆ.
577 ಆಸ್ಪತ್ರೆಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನು ದುರುಪಯೋಗ ಮಾಡಿದ್ದು, ಈ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಲದೇ 403 ಕುಟುಂಬಗಳಿಗೆ ಹಣವನ್ನು ವಾಪಸ್ ಮಾಡುವಂತೆ ಸೂಚನೆ ನೀಡಿದೆ.
ಕೋವಿಡ್ ರೋಗಿಗಳ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ರೆಫರಲ್ ಆಧಾರದಲ್ಲಿ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಹಿಂದೆಯೇ ಕ್ರಮ ವಹಿಸಲಾಗಿತ್ತು.
ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಭರಿಸಲಾಗುತ್ತದೆ. ಆದರೆ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಶುಲ್ಕ ವಸೂಲಿ ಮಾಡುವುದರ ಜೊತೆಗೆ, ಟ್ರಸ್ಟ್‌ನಿಂದಲೂ ಹಣ ಪಡೆದುಕೊಂಡಿವೆ.
ಈ ಕುರಿತು ಆರೋಗ್ಯ ಇಲಾಖೆಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆ ಇದೀಗ ಇಲಾಖೆ ನೋಟಿಸ್ ಜಾರಿ ಮಾಡಿದೆ.