ರಾಜ್ಯದ ಈ ಭಾಗದಲ್ಲಿ ಜೂ. 2 ರಿಂದ 6 ರವರೆಗೆ ವ್ಯಾಪಕ ಮಳೆ rainfall
ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ದಟ್ಟ ಮೋಡ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 2 ರಿಂದ 6 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉ. ಕನ್ನಡ ಜಿಲ್ಲೆಗಳಲ್ಲಿ ಜೂನ್ 4 ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಬಾಗಲಕೋಟೆ, ಬಿಜಾಪುರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ಜೂನ್ 3 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ ಎರಡರಿಂದ ನಾಲ್ಕರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.