ಕೊರೊನಾ ವೈರಸ್ ಮಾನವ ಸೃಷ್ಟಿ ಎಂಬ ಪೋಸ್ಟ್ ಗಳನ್ನ ಡಿಲೀಟ್ ಮಾಡಲ್ಲ – ಫೇಸ್ ಬುಕ್
ಜನಪ್ರಿಯ ಹಾಗೂ ಪ್ರಸಿದ್ಧ ಸಮಾಜಿಕ ಜಾಲತಾಣ ಫ್ಲಾಟ್ ಫಾರ್ಮ್ ಆಗಿರುವ ಫೇಸ್ ಬುಕ್ ಇನ್ಮುಂದೆ ಕೋವಿಡ್ 19 ವೈರಸ್ ಮಾನವ ಸೃಷ್ಟಿ ಎಂದು ಅಭಿಪ್ರಾಯ ವ್ಯಕ್ತಪಡಿಸುವ ಪೋಸ್ಟ್ ಗಳನ್ನು ಇನ್ನು ಡಿಲೀಟ್ ಮಾಡದೇ ಇರುವ ನಿರ್ಧಾರ ತೆಗೆದುಕೊಂಡಿದೆ.
ವೈರಸ್ ಮೂಲದ ಬಗ್ಗೆ ಚೀನಾದ ವಿರುದ್ಧ ಎದ್ದಿರುವ ಚರ್ಚೆಯ ಬಗ್ಗೆ ಈಗ ಹೊಸ ಆಯಾಮ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾನವನ ಸೃಷ್ಟಿ ಎಂದು ಹೇಳುವ ಪೋಸ್ಟ್ ಇನ್ನು ಮುಂದೆ ಡಿಲಿಟ್ ಮಾಡದೇ ಇರಲು ನಿರ್ಧರಿಸಿರುವುದಾಗಿ ಫೇಸ್ ಬುಕ್ ಹೇಳಿಕೊಂಡಿದೆ. ವೈರಸ್ ಮೂಲದ ಬಗ್ಗೆ ನಡೆಯುತ್ತಿರುವ ತನಿಖೆ ಮತ್ತು ಸಾರ್ವಜನಿಕ ಆರೋಗ್ಯ ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಫೇಸ್ ಬುಕ್ ವಕ್ತಾರರು ತಿಳಿಸಿದ್ದಾರೆ.
ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಲಾಜಿ ಕೇಂದ್ರದ ಮೂವರು ಸಂಶೋಧಕರು 2019 ನವೆಂಬರ್ ತಿಂಗಳಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಫೋಟಕ ವಿಚಾರ ಕಳೆದ ವಾರ ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಫೇಸ್ ಬುಕ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








