ಬೆಂಗಳೂರು : ಧಾರ್ಮಿಕ ಭಾವನೆಗೆ ಧಕ್ಕೆ ತರುವಂತ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡು ಕೋಮು ಗಲಭೆಗೆ ಕಾರಣವಾಗಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಿಂಸಾಚಾರದ ಪ್ರಮುಖ ಆರೋಪಿ ನವೀನ್ ಕುಮಾರ್ ಜಾಮೀನು ಅರ್ಜಿ ವಜಾಗೊಂಡಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿ ನವೀನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 1ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ. ಇಂದು ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಪೀಠ ಆರೋಪಿ ನವೀನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.