ಮೋಟಾರು ವಾಹನ ತೆರಿಗೆ ಪರಿಷ್ಕರಣೆಯಿಂದಾಗಿ ತೊಂದರೆಗೆ ಸಿಲುಕಿರುವ ವಾಣಿಜ್ಯ ವಾಹನಗಳ ಮಾಲೀಕರ ಅನುಕೂಲಕ್ಕೆ ತಕ್ಕಂತೆ ಕಂತುಗಳಲ್ಲಿ ತೆರಿಗೆ ಪಾವತಿಸಲು ಅವಕಾಶ ನೀಡಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ.
ಅಧಿವೇಶನದಲ್ಲಿ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಮಸೂದೆ 2023ಕ್ಕೆ ಅನುಮೋದನೆ ನೀಡಿ, ಜಾರಿಗೊಳಿಸಲಾಗಿದೆ. ದರೆ, ಏಕಾಏಕಿ ತೆರಿಗೆ ಹೆಚ್ಚಳದಿಂದ ಸಾರಿಗೆ ಉದ್ಯಮಕ್ಕಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವಂತೆ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಆಗ್ರಹಿಸುತ್ತಿವೆ. ಕನಿಷ್ಠ 6 ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡುವುದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಶಾಲಾ-ಕಾಲೇಜು ವಾಹನಗಳು, ಅತಿ ಭಾರದ ಸರಕು ಸಾಗಣೆ ವಾಹನಗಳು, ಮೋಟಾರು ಕ್ಯಾಬ್ಗಳ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ.








