ಬೆಂಗಳೂರು: ಪರ್ಫ್ಯೂಮ್ ಗೋಡೌನ್ ಗೆ ಬೆಂಕಿ ತಗುಲಿದ ಪರಿಣಾಮ ಮೂವರು ದಹನವಾಗಿರುವ ಘಟನೆಯೊಂದು ನಡೆದಿದೆ.
ಅಲ್ಲದೇ, ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಈ ಘಟನೆ ಕುಂಬಳಗೋಡು ಠಾಣಾ ವ್ಯಾಪ್ತಿಯ ರಾಮಸಂದ್ರದಲ್ಲಿ ನಡೆದಿದೆ. ಕೆಂಗೇರಿಯ ರಾಮಸಂದ್ರದಲ್ಲಿ ಈ ಅವಘಡ ಸಂಭವಿಸಿದೆ. ಅಕ್ಕಪಕ್ಕದ ಮನೆಗಳಿಗೂ ಹಾನಿ ಉಂಟಾಗಿದ್ದು, ಒಂದು ಬೈಕ್ ಬೆಂಕಿಗಾಹುತಿಯಾಗಿದೆ. ಕೆಲಸ ಮಾಡುತ್ತಿದ್ದ ಮೂವರು ಸಜೀವ ದಹನವಾಗಿದ್ದಾರೆ. ಐವರು ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಫರ್ಪೂಮ್ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ 8 ಜನ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಐವರು ಓಡಿ ಹೋಗಿದ್ದಾರೆ. ಹೀಗಾಗಿ ಗಾಯಗೊಂಡಿದ್ದಾರೆ. ಕಾರ್ಖಾನೆಯ ಮಾಲೀಕರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.