ಸಾವನ್ನಪ್ಪಿರುವಂತೆ ಸುಳ್ಳು ಸುದ್ದಿ ಹಬ್ಬಿಸಿದ್ದ ನಟಿ ಪೂನಂ ಪಾಂಡೆ (Poonam Pandey) ವಿರುದ್ಧ ದೂರು ದಾಖಲಾಗಿದೆ.
ಫೆಬ್ರವರಿ 2ರಂದು ಪೂನಂ ಪಾಂಡೆ ಕ್ಯಾನ್ಸರ್ನಿಂದ ಸಾವನ್ನಪ್ಪಿದರು (Poonam Pandey Death) ಎಂದು ಸುಳ್ಳು ಸುದ್ದಿ ಹರಡಿಸಲಾಗಿತ್ತು. ಸ್ವತಃ ಪೂನಂ ಪಾಂಡೆ ಸಾಮಾಜಿಕ ಜಾಲತಾಣದಿಂದಲೇ ಈ ಸುದ್ದಿ ಹಬ್ಬಿಸಲಾಗಿತ್ತು. ಆದರೆ, ಮರು ದಿನ ಇದು ಫೇಕ್ ನ್ಯೂಸ್ ಎಂಬುವುದು ಸ್ಪಷ್ಟವಾಯಿತು. ಹೀಗಾಗಿ ಪತ್ರಕರ್ತರೊಬ್ಬರು ಪೂನಂ ಪಾಂಡೆ ವಿರುದ್ಧ ದೂರು ದಾಖಲಿಸಿದ್ದಾರೆ.
ಮುಂಬಯಿನಲ್ಲಿ ಪತ್ರಕರ್ತರೊಬ್ಬರು ಪೂನಂ ಪಾಂಡೆ ವಿರುದ್ಧ ದೂರು ದಾಖಲಿಸಿದ್ದು, ಸಾವಿನ ಕುರಿತು ಸುಳ್ಳು ಸುದ್ದಿ ಹರಡಲು ಕಾರಣರಾದ ಎಲ್ಲರ ವಿರುದ್ಧವೂ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೇ, ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗರ್ಭಕಂಠದ ಕ್ಯಾನ್ಸರ್ನಿಂದ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿತ್ತು. ಇದು ಆತಂಕಕ್ಕೆ ಕಾರಣವಾಗಿತ್ತು. ಜನ ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳ ತನಕ ಹಲವರು ಶ್ರದ್ಧಾಂಜಲಿ ಅರ್ಪಿಸಿದ್ದರು. ಆದರೆ, ಇದು ಪ್ರಚಾರಕ್ಕಾಗಿ ಮಾಡಿದ್ದು ಎಂಬುವುದು ಗೊತ್ತಾದಾಗ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.