ಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನರಾಗಿದ್ದು, ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ಮೆಟ್ರೋ ಸಂಚಾರ ಬಂದ್ ಇರಲಿದೆ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ, ಇದಕ್ಕೆ ಬಿಎಂಆರ್ ಸಿಎಲ್ ಟ್ವೀಟ್ ಮೂಲಕ ಸ್ಪಷ್ಟನ ನೀಡಿದೆ.
ನಮ್ಮ ಮೆಟ್ರೋ ಎಂದಿನಂತೆ ಸೇವೆ ಸಲ್ಲಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಲಾಗಿದೆ. ಪ್ರತಿನಿತ್ಯ ಯಾವ ಸಮಯಕ್ಕೆ ಮೆಟ್ರೋ ಸಂಚಾರ ಆರಂಭವಾಗುತ್ತೋ ಅದೇ ಸಮಯಕ್ಕೆ ಲಭ್ಯವಿರಲಿದೆ. ಹೀಗಾಗಿ ಪ್ರಯಾಣಿಕರು ಎಂದಿನಂತೆ ಮೆಟ್ರೋ ಬಳಕೆ ಮಾಡಬಹುದು.








