ಕೊಪ್ಪಳ: ಚಿರತೆ ದಾಳಿಗೆ ಯುವಕ ಬಲಿಗೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಮೃತ ಕುಟುಂಬಸ್ಥರು ಆರೋಪಿಸಿ ಇಡೀ ದಿನ ರಸ್ತೆಯಲ್ಲೇ ಶವ ಇಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡೆಯ ಕುರುಚಲ ಗುಡ್ಡದಲ್ಲಿ ದನ ಮೇಯಿಸಲು ಹೋಗಿದ್ದ ಯುವಕ ರಾಘವೇಂದ್ರ ವೆಂಕಟೇಶ ಬಲಿಯಾಗಿದ್ದಾನೆ. ಇದಕ್ಕೆ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿನೇ ಕಾರಣ. ಅದಕ್ಕಾಗಿ ಸ್ಥಳಕ್ಕೆ ಅರಣ್ಯ ಸಚಿವ ಆನಂದಸಿಂಗ್ ಹಾಗೂ ಶಾಸಕ ಪರಣ್ಣ ಮನವಳ್ಳಿ ಬರಬೇಕು ಎಂದು ಗ್ರಾಮಸ್ಥರು ಹಾಗೂ ಕುಟುಂಬದವರು ಪಟ್ಟು ಹಿಡಿದು ರಸ್ತೆ ತಡೆ ನಡೆಸಿದರು.
ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಕುಟುಂಬದವರ ಮನವೊಲಿಸಲು ಮುಂದಾದಾಗ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಆನೆಗೊಂದಿ ಸಾಣಾಪುರ ಮುಖ್ಯರಸ್ತೆಯ ಮಧ್ಯದಲ್ಲೆ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ನಂತರ ಗಂಗಾವತಿ ಉಪವಿಭಾಗದ ಡಿವೈಎಸ್‍ಪಿ ಆರ್. ಉಜ್ಜಿನಕೊಪ್ಪ ಸಂಬಂಧಿಕರಿಗೆ ಸಾಂತ್ವನ ಹೇಳಿ ಸಮಾಧಾನಪಡಿಸಿದರು.
ಪೋಷಕರು ಬೆಳಿಗ್ಗೆಯಿಂದ ಸಂಜೆವರೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಅರಣ್ಯ ಸಚಿವ ಆನಂದ್ ಸಿಂಗ್, ಶಾಸಕ ಪರಣ್ಣ ಮುನವಳ್ಳಿ ಸ್ಥಳಕ್ಕೆ ಭೇಟಿ ಕುಟುಂಬಸ್ಥರ ಅಹವಾಲು ಆಲಿಸಿದರು. ಆದಷ್ಟು ಬೇಗ ಚಿರತೆ ಸೆರೆ ಹಿಡಿಯಲು ಅಧಿಕಾರಿಗಳಿಗೆ ಸೂಚನೆ ನೀಡುವ ಭರವಸೆ ನೀಡಿದರೂ ಸಹ, ಸಾರ್ವಜನಿಕರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಿಗ್ಗೆಯಿಂದ ಸಂಜೆವರೆಗೆ ರಸ್ತೆ ತಡೆ ನಡೆಸಿದ್ದರಿಂದ ಆನೆಗೊಂದಿ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel