ಮಂಗಳೂರು | ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಮಂಗಳೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಹಳೆಯಂಗಡಿಯ ಕಲ್ಲಾಪು ಬಳಿ ನಡೆದಿದೆ.
ಮೃತರನ್ನು 38 ವರ್ಷದ ವಿನೋದ್ ಸಾಲ್ಯಾನ್, 38 ವರ್ಷದ ರಚನಾ, 10 ವರ್ಷ ಸಾಧ್ಯ ಎಂದು ಗುರುತಿಸಲಾಗಿದೆ.
ಕಳೆದ ಎರಡು ದಿನಗಳಿಂದ ಮನೆಯಿಂದ ಯಾರು ಹೊರಬಾರದ ಹಿನ್ನಲೆ ನೆರೆಹೊರೆಯವರು ಮನೆಯ ಕಿಟಕಿಯಲ್ಲಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಎಸ್ಮಾ ಎಂದರೇನು..? ಜಾರಿಯಾದ್ರೆ ಏನಾಗುತ್ತೆ..?
ಕೂಡಲೇ ಸ್ಥಳೀಯ ಮುಲ್ಕಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿ ಪೊಲೀಸರು ಬಾಗಿಲನ್ನ ತೆರೆದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತರು ಆಹಾರದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮನೆಯಲ್ಲಿ ವಿಷದ ಬಾಟಲ್ ಲಭ್ಯವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








