ಮಂಡ್ಯ: ಕೌಟುಂಬಿಕ ಕಲಹದಿಂದಾಗಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಇಲ್ಲಿಯ ನೆಹರು ನಗರದ ಪೂರ್ವ ಬಡಾವಣೆಯಲ್ಲಿ ನಡೆದಿದ್ದು, ಪದ್ಮ(36) ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದರು.
ಮಹಿಳೆಯ ಪತಿ ಸಿದ್ದರಾಜು ಮೇಲೆ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪದ್ಮ ಹಾಗೂ ಸಿದ್ದರಾಜು ಪ್ರೀತಿಸಿ 13 ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ, ಇತ್ತೀಚೆಗೆ ಹಣಕ್ಕಾಗಿ ಪತಿ ಸಿದ್ದರಾಜು ಪೀಡಿಸುತ್ತಿದ್ದ. ಹೀಗಾಗಿ ಗಲಾಟೆ ಕೂಡ ನಡೆದಿತ್ತು. ಹಲವು ಬಾರಿ ಹಲ್ಲೆ ಕೂಡ ನಡೆಸಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.








