ಬೆಂಗಳೂರು: ಅನುಮಾನಾಸ್ಪದ ರೀತಿಯಲ್ಲಿ ವಿವಾಹಿತ ಮಹಿಳೆ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಇಲ್ಲಿಯ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ನಡೆದಿದೆ. ರಂಜಿತಾ(27) ಸಾವನ್ನಪ್ಪಿದ ಮಹಿಳೆ. ಈ ಹಿನ್ನೆಲೆಯಲ್ಲಿ ಪತಿ ಮಧು ಹಾಗೂ ಅವರ ಕುಟುಂಬಸ್ಥರ ವಿರುದ್ಧ ರಂಜಿತಾ ಪೋಷಕರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ಮೂಲದ ರಂಜಿತಾಗೆ ಅವರೊಂದಿಗೆ ತುರುವೇಕೆರೆ ಮೂಲದ ಮಧು ಜೊತೆ ಮದುವೆ ಮಾಡಲಾಗಿತ್ತು. ಇವರಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ರಂಜಿತಾ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದು, ಖಾಸಗಿ ಕಂಪನಿಯೊಂದರಲ್ಲಿ ಮಧು ಕೆಲಸ ಮಾಡುತ್ತಿದ್ದ. ಆದರೆ, ರಂಜಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾವಿಗೂ ಮುನ್ನ ತಾಯಿಗೆ ವಿಡಿಯೋ ಕಾಲ್ ಮಾಡಿದ್ದರು. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.