ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯು ಪತ್ನಿಗೆ ಚಾಕು ಹಾಕಿ ಮಹಡಿಯಿಂದ ಹಾರಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಲಕ್ನೋದಲ್ಲಿ ನಡೆದಿದೆ. ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ಹೋಗಿ ಪತಿಯು ಪತ್ನಿಗೆ ಚಾಕು ಹಾಕಿದ್ದಾನೆ. ಆನಂತರ ಮೂರನೇ ಮಹಡಿಯಿಂದ ಜಿಗಿದಿದ್ದಾನೆ. ಘಟನೆಯಲ್ಲಿ ಆರೋಪಿಯು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಯನ್ನು ಆದಿತ್ಯ ಕಪೂರ್ ಎನ್ನಲಾಗಿದೆ. ಈತ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳ ಎದುರೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿತ ಆದಿತ್ಯ ಹಲವಾರು ಬಾರಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಅಲ್ಲದೇ, ಆತ್ಮಹತ್ಯೆಗೂ ಕೆಲವು ಬಾರಿ ಯತ್ನಿಸಿದ್ದ ಎನ್ನಲಾಗಿದೆ.