ಬಲತ್ಕಾರಕ್ಕೆ ಯತ್ನಿಸಿದ ಆರೋಪಿಯನ್ನು ಕೊಲೆ ಮಾಡಿದ ಕುಟುಂಬಸ್ಥರು – Saaksha Tv
ಉತ್ತರಪ್ರದೇಶ: ಬಲತ್ಕಾರಕ್ಕೆ ಯತ್ನಿಸಿದ ಆರೋಪಿಯನ್ನು ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಉನ್ನವೋ ಜಿಲ್ಲೆಯಲ್ಲಿ ನಡೆದಿದೆ.
ದಾಹಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ಕುಟುಂಬಸ್ಥರು ಹೊಲಕ್ಕೆ ಹೋಗಿದ್ದರು. ಈ ವೇಳೆ, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಇದೇ ಸಮಯದಲ್ಲಿ ಮನೆಗೆ ಬಂದ ಆರೋಪಿಯು ಬಾಲಕಿಗೆ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವಿಷಯ ತಿಳಿದು ಮನೆಗೆ ದೌಡಾಯಿಸಿದ ಕುಟುಂಬಸ್ಥರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ ಎಂದು ಹೇಳಲಾಗಿದೆ.
ನಂತರ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ದಾಹಿ ಪೊಲೀಸ್ ಠಾಣೆಯಲ್ಲಿ ಕಿರುಕುಳ ಮತ್ತು ಹಲ್ಲೆ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.








