ಖ್ಯಾತ ನಟ ದಿನೇಶ್ ಫಡ್ನಿಸ್ ಇಹಲೋಕ ತ್ಯಜಿಸಿದ್ದಾರೆ. ಹಿಂದಿ ಕಿರುತೆರೆಯಲ್ಲಿ ಹೆಸರು ಮಾಡಿದ್ದ ನಟನ ಸಾವನ್ನಪ್ಪಿದ್ದಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.
ಸಿಐಡಿ ಪಾತ್ರದ ಮೂಲಕ ಮನೆ ಮಾತಾಗಿದ್ದ ದಿನೇಶ್ ಫಡ್ನಿಸ್ (Dinesh Phadnis) ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸಹ ನಟ ದಯಾನಂದ್ ಶೆಟ್ಟಿ ಈ ಮಾಹಿತಿ ಖಚಿತ ಪಡಿಸಿದ್ದಾರೆ. ಹೃದಯಾಘಾತವಾಗುತ್ತಿದ್ದಂತೆ ಅವರನ್ನು ಮುಂಬಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ದಿನೇಶ್ ಸಾಕಷ್ಟು ಟಿವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಹಲವು ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಸಿಐಡಿ ಪಾತ್ರದ ಮೂಲಕ ಅವರ ಮನೆ ಮಾತಾಗಿದ್ದರು.