ಮಲಯಾಳಂ (Malayalam) ಚಿತ್ರರಂಗದ ಖ್ಯಾತ ನಟಕಲಾಭವನ್ ಹನೀಫ್ (Kalabhavan Hanif) ಇಹಲೋಕ ತ್ಯಜಿಸಿದ್ದಾರೆ.
ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಹನೀಫ್ ಅವರು ಕಳೆದ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪತ್ನಿ ವಹಿದಾ ಹೇಳಿದ್ದಾರೆ.
ಹನೀಫ್ ಅವರು ಮಿಮಿಕ್ರಿ ಕಲೆಯ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ಇಲ್ಲಿಯವರೆಗೆ ಹನೀಫ್ 150ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. 1991ರಲ್ಲಿ ಅವರು ಸಿನಿಮಾ ರಂಗ ಪ್ರವೇಶಿಸಿದ್ದರು. ಹೀಗಾಗಿ ಇಡೀ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.