Dr Gururaj Hebbar | ಖ್ಯಾತ ವೈದ್ಯ ಡಾ.ಗುರುರಾಜ್ ಹೆಬ್ಬಾರ್ ನಿಧನ
ಹಾಸನ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ವೈದ್ಯ ಡಾ.ಗುರುರಾಜ್ ಹೆಬ್ಬಾರ್ ಅವರು ವಿಧಿವಶರಾಗಿದ್ದಾರೆ.
ಜನರ ಡಾಕ್ಟರ್ ಎಂದೇ ಹಾಸನದಲ್ಲಿ ಹೆಸರಾಗಿದ್ದ ಗುರುರಾಜ್ ಹೆಬ್ಬಾರ್ ಅವರು ಶನಿವಾರ ಇಹಲೋಕ ತ್ಯಜಿಸಿದ್ದಾರೆ.
ವೈದ್ಯ ವೃತ್ತಿ ಜೊತೆಗೆ ಸಮಾಜ ಸೇವೆಯನ್ನೂ ಬದುಕಾಗಿಸಿಕೊಂಡಿದ್ದ ಹೆಬ್ಬಾರ್ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಹೀಗಾಗಿ ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆದ್ರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಹೆಬ್ಬಾರ್ ಅವರು, ಸಂಜೀವಿನಿ ಸಹಕಾರಿ ಆಸ್ಪತ್ರೆ, ಕಾಮದೇನು ವೃದ್ಧಾಶ್ರಮದ ಸಂಸ್ಥಾಪಕ ಅಧ್ಯಕ್ಷರು ಮತ್ತು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಆಫ್ ಹಾಸನ ವಿಭಾಗದ ಉಪಾಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಗುರುರಾಜ್ ಹೆಬ್ಬಾರ್ ನಿಧನಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಹಾಸನ ಶಾಸಕ ಪ್ರೀತಂ ಜೆ.ಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.