ಬೆಂಗಳೂರು : ಚಂದನವನದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಅವರ ನಗರದಲ್ಲಿನ ನಿವಾಸದಲ್ಲಿ ಕಳಳತನ ನಡೆದಿದೆ.
ಅವರ ಮನೆಯಲ್ಲಿ ಇಟ್ಟಿದ್ದ 2.50 ಲಕ್ಷ ರೂ.ಗಳನ್ನು ದುಷ್ಕರ್ಮಿಗಳು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಎರಡು ದಿನಗಳ ಕಾಲ ಕುಟುಂಬಸ್ಥರು ಇಡೀ ಮನೆಯಲ್ಲಿ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಗುರುಕಿರಣ್ ಅವರ ಅತ್ತೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಕೆಲಸದಾಕೆ ರತ್ನಮ್ಮ ಅವರ ವಿಚಾರಣೆ ನಡೆಸಿರುವ ಚಂದ್ರಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.