BJP | ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ
ಬೆಂಗಳೂರು : ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ. ರಾಜ್ಯ ಸರ್ಕಾರ ಅತ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಸಿಎಎ ಹೋರಾಟ ಸಂದರ್ಭದಲ್ಲಿ ಕಾನೂನು ಭಂಗ ಮಾಡಿದವರ ವಿರುದ್ಧ ತೆಗೆದುಕೊಂಡ ಉಗ್ರ ಕ್ರಮವನ್ನೇ ತೆಗೆದುಕೊಳ್ಳುತ್ತೇವೆ ಎಂದು ರಾಜ್ಯ ಬಿಜೆಪಿ ಘಟಕ ತಿಳಿಸಿದೆ.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಹಿಂದಿರುವ ಶಕ್ತಿಗಳನ್ನು ಹೆಡೆಮುರಿ ಕಟ್ಟುತ್ತೇವೆ. ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳೇ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ್ದಾರೆ, ಎಲ್ಲವನ್ನೂ ಬಯಲಿಗೆಳೆಯುತ್ತೇವೆ..
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷದ ಈ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ನಾವು ಗಾಂಧಿ ಕುಟುಂಬದ ಗುಲಾಮರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗುಲಾಮಗಿರಿ ವಿರುದ್ಧ ಹೋರಾಡಿ ಪ್ರಾಣ ಬಲಿದಾನ ಮಾಡಿದವರಿಗೆ ಇದು ಅವಮಾನವಲ್ಲವೇ ಎಂದು ಲೇವಡಿ ಮಾಡಿದೆ.
ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೈ ಕಟ್ಟಿ ಕುಳಿತಿಲ್ಲ.
ಬೆಂಗಳೂರಿನ ಕೆಜೆ ಹಳ್ಳಿ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಯಾವ ಕ್ರಮಕೈಗೊಂಡಿದ್ದೆವೋ ಅದೇ ಕ್ರಮ ಕೈಗೊಳ್ಳುತ್ತೇವೆ.#ಹಿಂದೂವಿರೋಧಿಕಾಂಗ್ರೆಸ್
— BJP Karnataka (@BJP4Karnataka) July 27, 2022
ಬಿಹಾರದಲ್ಲಿ ಸಿಕ್ಕಿಬಿದ್ದ ಪಿಎಫ್ಐ ಉಗ್ರರ “ಟೂಲ್ ಕಿಟ್” ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿದೆ. ಹತ್ಯೆಗಳ ಮೂಲಕ ಹಿಂದು ಸಮಾಜವನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ಕರಾವಳಿಯನ್ನು ರಕ್ತಸಿಕ್ತಗೊಳಿಸುವ ಕಾಂಗ್ರೆಸ್ ಪ್ರೇರಿತ ಪ್ರಯತ್ನವನ್ನು ಖಂಡಿಸುತ್ತೇವೆ.
ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ ಎಂದು ಅನಗತ್ಯ ವಿವಾದ ಸೃಷ್ಟಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರೇ, ಈ ಹತ್ಯೆಯ ಬಗ್ಗೆ ಏನು ಹೇಳುತ್ತೀರಿ? ಮತಾಂಧತೆಯನ್ನು ಖಂಡಿಸದ ಕಾಂಗ್ರೆಸ್ ಪಕ್ಷದ ಧೋರಣೆ ಅನುಮಾನಕ್ಕೆ ಕಾರಣವಾಗಿದೆ.
ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ ಎಂದು ಅನಗತ್ಯ ವಿವಾದ ಸೃಷ್ಟಿಸುತ್ತಿರುವ @DKShivakumar ಅವರೇ, ಈ ಹತ್ಯೆಯ ಬಗ್ಗೆ ಏನು ಹೇಳುತ್ತೀರಿ?
ಮತಾಂಧತೆಯನ್ನು ಖಂಡಿಸದ ಕಾಂಗ್ರೆಸ್ ಪಕ್ಷದ ಧೋರಣೆ ಅನುಮಾನಕ್ಕೆ ಕಾರಣವಾಗಿದೆ.#ಹಿಂದೂವಿರೋಧಿಕಾಂಗ್ರೆಸ್
— BJP Karnataka (@BJP4Karnataka) July 27, 2022
ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೈ ಕಟ್ಟಿ ಕುಳಿತಿಲ್ಲ. ಬೆಂಗಳೂರಿನ ಕೆಜೆ ಹಳ್ಳಿ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಯಾವ ಕ್ರಮಕೈಗೊಂಡಿದ್ದೆವೋ ಅದೇ ಕ್ರಮ ಕೈಗೊಳ್ಳುತ್ತೇವೆ ಎಂದು ಬರೆದುಕೊಂಡಿದೆ.








