ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಟ ಲಿಖಿತ್ ಶೆಟ್ಟಿ ನಟಿಸಿ, ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ.
ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದಾರೆ. ಖುಷಿ ರವಿ ಮತ್ತು ತೇಜಸ್ವಿನಿ ಶರ್ಮಾ ನಟಿಸಿದ್ದಾರೆ. ನಟ ಹಾಗೂ ನಟಿಯರಿಬ್ಬರು ಬಾಳೆ ಎಲೆಯಲ್ಲಿ ಊಟ ಮಾಡುತ್ತಿರುವ ಪೋಸ್ಟರ್ ಬಿಡುಗಡೆಯಾಗಿದೆ. ಒಟ್ಟಿಗೆ ಕುಳಿತು ಊಟ ಮಾಡುವ ಸಂಭ್ರಮವೇ ಹಬ್ಬ ಎಂಬ ಥೀಮ್ ಮೇಲೆ ಇದು ತಯಾರಾಗಿದೆ.
ನೋಡುಗರ ಗಮನವನ್ನು ಸೆಳೆದಿದೆ. ಸಿನೆಮಾಗೆ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲವು ಕೆಲಸಗಳು ಬಾಕಿಯಿವೆ. ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರ ಹೊಂದಿರುವ ಈ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದೆ. ಪ್ರೇಕ್ಷಕರು ಸಿನೆಮಾ ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರ ತಂಡಕ್ಕಿದೆ.
ಎನ್. ವಿನಾಯಕ ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನ ಕ್ಯಾಪ್ ಹಾಕಿದ್ದಾರೆ. ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನವಿದೆ. ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಹಲವರು ನಟಿಸಿದ್ದಾರೆ. ಸದ್ಯದಲ್ಲಿಯೇ ಚಿತ್ರವು ತೆರೆಗೆ ಅಪ್ಪಳಿಸಲಿದೆ.