ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್(Darshan) ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ವೇಳೆ, ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ. ಹೀಗಾಗಿ ದರ್ಶನ್ ನೋಡಲು ಅಭಿಮಾನಿಗಳು(Fans) ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗುತ್ತಿದ್ದಂತೆ ನಟನ ಪರ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ರಾಜ ಎಲ್ಲಿದ್ದರೂ ರಾಜನೇ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ, ದರ್ಶನ್ ಬೇಗ ಹೊರಗೆ ಬಾ ಎಂದು ದರ್ಶನ್ ಪರ ಜೈಕಾರ ಹಾಕಿದ್ದಾರೆ. ಹಲವರು ನಾಳೆ ಊರ ದೇವಿಗೆ ಪೂಜೆ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಗೆ ಸೆಪ್ಟೆಂಬರ್ 9ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ನೀಡಿತ್ತು. ಈ ಆದೇಶದ ನಂತರ ದರ್ಶನ್ ಅವರನ್ನು ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್ ವ್ಯಾನ್ ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು. ಇನ್ನು ಮುಂದೆ ದರ್ಶನ್ ಬಳ್ಳಾರಿ ಜೈಲಿನಲ್ಲಿ ಉಳಿಯಲಿದ್ದಾರೆ.








