ಕರ್ನಾಟಕ ವಿಧಾನ ಪರಿಷತ್ ನಲ್ಲಿ 6 ವರ್ಷ ಪೂರ್ಣ ಮಾಡಿ ನಿವೃತ್ತಿ ಹೊಂದುತ್ತಿರುವ ವಿಧಾನ ಪರಿಷತ್ ಸದಸ್ಯರಿಗೆ ವಿಧಾನಸೌಧದಲ್ಲಿ ಬೀಳ್ಕೊಡುಗೆ ಸಮಾರಂಭವನ್ನ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಮ್ಮ ಅವಧಿ ಪೂರ್ಣಗೊಳಿಸಿದ 15 ಮಂದಿ ವಿಧಾನ ಪರಿಷತ್ ಸದಸ್ಯರಿಗೆ ಸ್ಮಾನಿಸಲಾಯ್ತು. ಕಾರ್ಯಕ್ರಮದಲ್ಲಿ ವಿಪಕ್ಷ ಸಚೇತಕ ನಾರಾಯಣಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಈ ವೇಳೆ ವಿಧಾನ ಪರಿಷತ್ ನ ಸಭಾಪತಿ ಶ್ರೀ.ಕೆ. ಪ್ರತಾಪಚಂದ್ರ ಶೆಟ್ಟಿ , ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ನಾಯಕರಾದ ಎಸ್.ಅರ್.ಪಾಟೀಲ್ , ಕರ್ನಾಟಕ ವಿಧಾನ ಪರಿಷತ್ ನ ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.