ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಾಳೆ ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ಜಾಥಾಗೆ ಬೆಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ದೆಹಲಿ ಮಾದರಿಯಲ್ಲಿ ನಾಳೆ ಗಣರಾಜ್ಯೋತ್ಸವ ಪರೇಡ್ ಮುಗಿದ ಬಳಿಕ ರೈತರು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಜಾಥಾ ನಡೆಸಲು ಪೊಲೀಸರ ಅನುಮತಿ ಕೇಳಿದ್ದರು. ಆದರೆ, ಟ್ರ್ಯಾಕ್ಟರ್ ಜಾಥಾಗೆ ಅನುಮತಿ ಇಲ್ಲ. ಜತೆಗೆ ಸಾಂಕೇತಿಕ ಪ್ರತಿಭಟನೆಗೂ ಅವಕಾಶ ಇಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.
ನಾಳಿನ ಗಣರಾಜ್ಯೋತ್ಸವ ಪರೇಡ್‍ಗೆ ಭದ್ರತೆ ನೀಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಇಂದು ಸಂಜೆಯಿಂದಲೇ ಗಣರಾಜ್ಯೋತ್ಸವ ಪರೇಡ್‍ಗೆ ಪೊಲೀಸರ ಭದ್ರತೆ ಮಾಡುತ್ತಿದ್ದೇವೆ. ಹೀಗಾಗಿ ಟ್ರ್ಯಾಕ್ಟರ್ ಜಾಥಾ ಭದ್ರತೆ ನೀಡುವುದು ಕಷ್ಟವಾಗಿದೆ. ಹೀಗಾಗಿ ಟ್ರ್ಯಾಕ್ಟರ್ ಬಂದು ಸಾಂಕೇತಿಕ ಪ್ರತಿಭಟನೆ ನಡೆಸಲು ಅನುಮತಿ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಫ್ರೀಡಂಪಾರ್ಕ್‍ನಲ್ಲಿ ಮಾತ್ರ ಪ್ರತಿಭಟನೆಗೆ ಓಕೆ..!
ಟ್ರ್ಯಾಕ್ಟರ್ ಜಾಥಾಗೆ ಅನುಮತಿ ಇಲ್ಲ, ಆದರೆ, ಫ್ರೀಡಂಪಾರ್ಕ್‍ನಲ್ಲಿ ರೈತರು ಪ್ರತಿಭಟನೆಗೆ ಅನುಮತಿ ನೀಡಲಾಗುವುದು. ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆಗೆ ಅವಕಾಶ ನೀಡುವಂತೆ ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂಥ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಜಾಥಾ ನಡೆಸಲು ಈ ಹಿಂದೆ ಯಾವಾಗಲೂ ಅವಕಾಶ ಕೊಟ್ಟಿಲ್ಲ. ಹೀಗಾಗಿ ನಾಳೆಯ ಟ್ರ್ಯಾಕ್ಟರ್ ಜಾಥಾಗೆ ಅವಕಾಶ ಇಲ್ಲ. ಇಂದು ವೇಳೆ ರೈತರು ಟ್ರ್ಯಾಕ್ಟರ್‍ನೊಂದಿಗೆ ಬೆಂಗಳೂರು ಪ್ರವೇಶ ಮಾಡಲು ಯತ್ನಿಸಿದರೆ ನಗರದ ಒಳಗಡೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಟ್ರ್ಯಾಕ್ಟರ್ ಪರೇಡ್‍ಗೆ ರೈತರ ಸಜ್ಜು..
ನಾಳೆ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಪರೇಡ್ ನಡೆಯುತ್ತದೆ. ಗಣರಾಜ್ಯೋತ್ಸವ ಪರೇಡ್ ಮಾದರಿಯಲ್ಲಿಯೇ ನಾಳೆ ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್ ಜಾಥಾ ನಡೆಸಲು ತೀರ್ಮಾನಿಸಿದ್ದಾರೆ. ದೆಹಲಿ ಮಾದರಿಯಲ್ಲಿಯೇ ಬೆಂಗಳೂರಿನಲ್ಲೂ ಸಾವಿರಾರು ಟ್ರ್ಯಾಕ್ಟರ್, ಎತ್ತಿನಗಾಡಿಗಳೊಂದಿಗೆ ಜಾಥಾ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಪೊಲೀಸರ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದರು.
ಪೊಲೀಸರು ಟ್ರ್ಯಾಕ್ಟರ್ ಜಾಥಾ ನಡೆಸಲು ಅವಕಾಶ ನೀಡದೇ ಇದ್ದರೆ ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲೇ ಟ್ರ್ಯಾಕ್ಟರ್‍ಗಳನ್ನು ಅಡ್ಡ ನಿಲ್ಲಿಸಿ ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel